ಯೆರೆಮಿಯ 33:7

ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 33

5ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.

6ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.

7ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.

8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.

9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.

ಯೆರೆಮಿಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी