ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
5ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
6ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
8ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
9ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ