ಆಮೋಸ 6:12

ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.

ಸಂದರ್ಭದೊಂದಿಗೆ ಓದಿ · ಆಮೋಸ 6

10ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.

11ಇಗೋ, ಕರ್ತನು ಆಜ್ಞಾಪಿಸುತ್ತಾನೆ; ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.

12ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.

13ಏನೂ ಇಲ್ಲದ್ದರಲ್ಲಿ ಸಂತೋಷಪಡುವ ವರೇ, ನೀವು ಹೆಚ್ಚಳ ಪಡುವದು ಶೂನ್ಯವಾಗಿರುವ ಲ್ಲಿಯೇ? ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿ ಲ್ಲವೇ ಎಂದು ಹೇಳುತ್ತೀರಿ.

14ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.

ಆಮೋಸ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी