ಯೆಶಾಯ 53:10

ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 53

8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.

9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.

10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.

11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.

12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಯೆಶಾಯ 53 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी