ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
9ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
11ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
13ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ