ಯೆರೆಮಿಯ 11:18

ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 11

16ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.

17ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.

18ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.

19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.

20ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.

ಯೆರೆಮಿಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी