ಯೆಹೋಶುವ 18:9

ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 18

7ಆದರೆ ಲೇವಿಯರಿಗೆ ನಿಮ್ಮ ಸಂಗಡ ಪಾಲಿಲ್ಲ; ಅವರಿಗೆ ಕರ್ತನ ಯಾಜಕತ್ವವೇ ಅವರ ಬಾಧ್ಯತೆಯಾಗಿದೆ. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನಿನ ಆಚೆ ಮೂಡಣ ದಿಕ್ಕಿನಲ್ಲಿ ಕರ್ತನ ಸೇವಕನಾದ ಮೋಶೆಯು ಕೊಟ್ಟ ತಮ್ಮ ಬಾಧ್ಯತೆಯನ್ನು ತಕ್ಕೊಂಡಿದ್ದಾರೆ ಅಂದನು.

8ಆ ಮನುಷ್ಯರು ಹೊರಟುಹೋದರು. ಯೆಹೋಶುವನು ದೇಶವನ್ನು ವಿವರಿಸುವದಕ್ಕಾಗಿ ಹೋದವರಿಗೆ ಅಪ್ಪಣೆ ಕೊಟ್ಟು--ನೀವು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಅದರ ವಿವರಣೆಯನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿ; ನಾನು ಶೀಲೋವಿನಲ್ಲಿ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ತಿರಿಗಿ ಬರಲಿ ಎಂದು ಹೇಳಿದನು.

9ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.

10ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್‌ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.

11ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.

ಯೆಹೋಶುವ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी