ಆಮೋಸ 4:4

ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.

ಸಂದರ್ಭದೊಂದಿಗೆ ಓದಿ · ಆಮೋಸ 4

2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.

3ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ. ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ.

4ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.

5ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.

6ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.

ಆಮೋಸ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी