ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.
22ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
23ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.
25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ