ಯೆಹೆಜ್ಕೇಲನು 48:20

ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 48

18ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು.

19ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು.

20ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.

21ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.

22ಇದಲ್ಲದೆ ಲೇವಿಯರ ಸ್ವಾಸ್ತ್ಯದಿಂದ ಮೊದಲುಗೊಂಡು ಮತ್ತು ಪಟ್ಟಣದ ಸ್ವಾಸ್ತ್ಯದಿಂದ ಪ್ರಧಾನನ ನಡುವೆ ಇರುವಂಥ ದ್ದು ಯೆಹೂದದ ಮೇರೆಗೂ ಬೆನ್ಯಾವಿಾನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಆಗಬೇಕು.

ಯೆಹೆಜ್ಕೇಲನು 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी