ವಿಮೋಚನಕಾಂಡ 19:10

ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 19

8ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.

9ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.

10ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.

11ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.

12ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.

ವಿಮೋಚನಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी