ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
1ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
2ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
3ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
4ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ