ಯೋಹಾನನು 13:35

ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 13

33ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.

34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.

35ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.

36ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.

37ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.

ಯೋಹಾನನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी