ಆದಿಕಾಂಡ 41:55

ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 41

53ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ

54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.

55ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.

56ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.

57ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.

ಆದಿಕಾಂಡ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी