ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
45ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
46ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
47ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
48ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
49ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ