ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
14ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
15ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
16ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
17ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
18ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ