ಯಾಜಕಕಾಂಡ 26:15

ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 26

13ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.

14ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ

15ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ

16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.

17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.

ಯಾಜಕಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी