ಧರ್ಮೋಪದೇಶಕಾಂಡ 28:11

ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 28

9ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.

10ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;

11ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.

12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.

13ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.

ಧರ್ಮೋಪದೇಶಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी