ಹೋಶೇ 2:5

ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.

ಸಂದರ್ಭದೊಂದಿಗೆ ಓದಿ · ಹೋಶೇ 2

3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.

4ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ,

5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.

6ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.

7ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.

ಹೋಶೇ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी