ಅರಣ್ಯಕಾಂಡ 14:32

ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 14

30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.

31ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.

32ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.

33ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.

34ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.

ಅರಣ್ಯಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी