ಯಾಜಕಕಾಂಡ 14:25

ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 14

23ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.

24ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.

25ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.

26ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು

27ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.

ಯಾಜಕಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी