ಎಸ್ತೇರಳು 1:5

ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 1

3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.

4ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.

5ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.

6ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.

7ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.

ಎಸ್ತೇರಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी