ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.
15ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
16ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
17ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.
18ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
19ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ