ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
10ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
11ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
12ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
13ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
14ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ