ಧರ್ಮೋಪದೇಶಕಾಂಡ 19:3

ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 19

1ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ

2ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.

3ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.

4ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.

5ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,

ಧರ್ಮೋಪದೇಶಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी