ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
20ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
21ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
22ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ