ಮತ್ತಾಯನು 22:15

ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 22

13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.

14ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.

15ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.

16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು

17ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.

ಮತ್ತಾಯನು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी