ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
4ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
5ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
6ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
8ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ