ಆದಿಕಾಂಡ 48:17

ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 48

15ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,

16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್‌ ಇಸಾಕ್‌ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.

17ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.

18ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.

19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.

ಆದಿಕಾಂಡ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी