೨ ಪೂರ್ವಕಾಲವೃತ್ತಾಂತ 14:5

ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 14

3ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,

4ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.

5ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.

6ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.

7ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.

೨ ಪೂರ್ವಕಾಲವೃತ್ತಾಂತ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी