ಎಫೆಸದವರಿಗೆ 1:5

ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 1

3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.

5ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.

6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.

7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.

ಎಫೆಸದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी