೧ ಅರಸುಗಳು 16:27

ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

ಸಂದರ್ಭದೊಂದಿಗೆ ಓದಿ · ೧ ಅರಸುಗಳು 16

25ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.

26ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.

27ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

28ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.

29ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;

೧ ಅರಸುಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी