ಅರಣ್ಯಕಾಂಡ 13:25

ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 13

23ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.

24ಇಸ್ರಾಯೇಲ್‌ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್‌ ಹಳ್ಳವೆಂದು ಹೆಸರಿಟ್ಟರು.

25ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.

26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್‌ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.

27ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.

ಅರಣ್ಯಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी