೨ ಕೊರಿಂಥದವರಿಗೆ 11:14

ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 11

12ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.

13ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.

14ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.

15ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.

16ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ.

೨ ಕೊರಿಂಥದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी