೧ ಸಮುವೇಲನು 13:16

ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್‌ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 13

14ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.

15ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್‌ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.

16ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್‌ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.

17ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‌ ದೇಶದ ಕಡೆಗೆ ಹೋಯಿತು;

18ಮತ್ತೊಂದು ಗುಂಪು ಬೇತ್‌ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್‌ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.

೧ ಸಮುವೇಲನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी