ಯೆಶಾಯ 66:2

ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.

ಸಂದರ್ಭದೊಂದಿಗೆ ಓದಿ · ಯೆಶಾಯ 66

1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?

2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.

3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.

4ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.

ಯೆಶಾಯ 66 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी