ಯಾಜಕಕಾಂಡ 1:7

ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 1

5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.

6ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು.

7ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.

8ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು;

9ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.

ಯಾಜಕಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी