೧ ಕೊರಿಂಥದವರಿಗೆ 14:22

ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 14

20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.

21ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.

22ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.

23ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?

24ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.

೧ ಕೊರಿಂಥದವರಿಗೆ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी