ಪ್ರಸಂಗಿ 7:14

ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 7

12ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.

13ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು.

14ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.

15ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.

16ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?

ಪ್ರಸಂಗಿ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी