ಯೆಹೆಜ್ಕೇಲನು 37:13

ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 37

11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್‌ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.

12ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್‌ ದೇಶಕ್ಕೆ ನಿಮ್ಮನ್ನು ತರುವೆನು.

13ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

14ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.

15ಕರ್ತನ ವಾಕ್ಯವು ನನಗೆ ತಿರುಗಿ ಬಂದು ಹೇಳಿದ್ದೇ ನಂದರೆ--

ಯೆಹೆಜ್ಕೇಲನು 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी