೧ ಅರಸುಗಳು 9:7

ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 9

5ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.

6ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ

7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.

8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.

9ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.

೧ ಅರಸುಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी