ಲೂಕನು 8:27

ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.

ಸಂದರ್ಭದೊಂದಿಗೆ ಓದಿ · ಲೂಕನು 8

25ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.

26ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.

27ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.

28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.

29(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ

ಲೂಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी