ಯೆಹೋಶುವ 8:27

ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 8

25ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು.

26ಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.

27ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.

28ಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ಈ ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು.

29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.

ಯೆಹೋಶುವ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी