ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
12ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
15ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.
16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ