ಮತ್ತಾಯನು 5:19

ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 5

17ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.

18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

19ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.

20ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.

21ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.

ಮತ್ತಾಯನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी