ಅರಣ್ಯಕಾಂಡ 22:3

ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್‌ ಮಕ್ಕಳನ್ನು ಕಂಡು ದಿಗಿಲು ಪಟ್ಟರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 22

1ಇಸ್ರಾಯೇಲ್‌ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.

2ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು.

3ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್‌ ಮಕ್ಕಳನ್ನು ಕಂಡು ದಿಗಿಲು ಪಟ್ಟರು.

4ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.

5ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.

ಅರಣ್ಯಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी