ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.
8ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
9ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
10ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.
11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ