ಯೆಹೆಜ್ಕೇಲನು 3:3

ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 3

1ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಈ ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು.

2ಆಗ ನಾನು ನನ್ನ ಬಾಯನ್ನು ತೆರೆದೆನು, ಆತನು ನನಗೆ ಆ ಸುರಳಿಯನ್ನು ತಿನ್ನಿಸಿದನು.

3ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.

4ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.

5ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ.

ಯೆಹೆಜ್ಕೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी