ಯೆಶಾಯ 44:19

ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.

ಸಂದರ್ಭದೊಂದಿಗೆ ಓದಿ · ಯೆಶಾಯ 44

17ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.

18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

19ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.

20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.

21ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.

ಯೆಶಾಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी