೨ ಪೇತ್ರನು 2:18

ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 2

16ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.

17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.

18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.

19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.

20ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.

೨ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी